ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಅಣಶಿಯ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ವಿಜ್ರಂಭಣೆಯಿಂದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

 

ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ದೀಪ ಪ್ರಜ್ವಲನ ಮಾಡುವ ಮೂಲಕ, ಅಂಬೇಡ್ಕರರವರ ಭಾವಚಿತ್ರಕ್ಕೆ ಗಣ್ಯರು,ಶಿಕ್ಷಕ ವೃಂದದವರು, ಮಕ್ಕಳು ಪುಷ್ಪ ನಮನ ಸಲ್ಲಿಸುವ ಮೂಲಕ,ಸಂವಿಧಾನ ಪ್ರಸ್ತಾವನೆಯನ್ನು ಓದಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮಕ್ಕಳಿಗೆ ಸಂವಿಧಾನ ಪ್ರಸ್ತಾವನೆ, ರಾಷ್ಟ್ರಗೀತೆಯ ಕುರಿತು ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಅಣಶಿ ಗ್ರಾಮ ಪಂಚಾಯತ ವತಿಯಿಂದ ನೋಟ್ ಬುಕ್ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಣಶಿ ಗ್ರಾಮ ಪಂಚಾಯತ ಅಧ್ಯಕ್ಷೆ ಪುಷ್ಪಾ ವೇಳಿಪ,ಗ್ರಾಮ ಪಂಚಾಯತ ಕಾರ್ಯದರ್ಶಿ ಲಕ್ಷ್ಮಣ ಬರ್ಸೇಕರ, ಗ್ರಾಮ ಪಂಚಾಯತ ಗ್ರಂಥಪಾಲಕ ರಮೇಶ ಸಾವಂತ,ಅಣಶಿ ಶಾಲೆಯ ಮುಖ್ಯ ಶಿಕ್ಷಕಿಯಾದ ಅಕ್ಷತಾಕೃಷ್ಣಮೂರ್ತಿ,ಸಹ ಶಿಕ್ಷಕಿಯರಾದ ರೂಪಾ ಮಡಿವಾಳ,ನೀತಾ ವೇಳಿಪ,ಪ್ರೇಸಿಲ್ಲಾ ಕಾಜುಗಾರ ಇದ್ದರು.