ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಬಾಬು ಜಗಜೀವನರಾಮ ಭವನದಲ್ಲಿ ಜಿಲ್ಲಾ ಆಡಳಿತ,ಜಿಲ್ಲಾ ಪಂಚಾಯತ ಉತ್ತರಕನ್ನಡ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉತ್ತರಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರ ಜೋಯಿಡಾ ತಾಲೂಕಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ನಂದಿಗದ್ದೆ ಶಾಲೆಯ ವಿದ್ಯಾರ್ಥಿಗಳಾದ ಬಾಲಕರ ವಿಭಾಗದಲ್ಲಿ ನಂದನಕುಮಾರ ಉಪಾಧ್ಯ ಪ್ರಥಮ ಸ್ಥಾನ,ಬಾಲಕಿಯರ ವಿಭಾಗದಲ್ಲಿ ಮರೀಶಾ ಫರ್ನಾಂಡಿಸ್ ತೃತೀಯ ಸ್ಥಾನ ಪಡೆದಿರುತ್ತಾರೆ.
ಇವರ ಸಾಧನೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತುಕಾರಾಮರವರು, ಜೋಯಿಡಾ ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ಸಂತೋಷ ಮಂತೆರೋ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಶೀರ್ ಅಹ್ಮದ ಶೇಖ,ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕಿ ವಿಜಯಲಕ್ಷ್ಮೀ ಹಂಜಿ,ತಾಲೂಕಾ ಶಿಕ್ಷಕಕರ ಸಂಘದ ಅಧ್ಯಕ್ಷರಾದ ಯಶವಂತ ನಾಯ್ಕ,ಕಾರ್ಯದರ್ಶಿಗಳಾದ ಮಹಾದೇವ ಹಳದನಕರ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ(ಸಿ.ಆರ್.ಪಿ) ಭಾಸ್ಕರ ಗಾಂವ್ಕರ,ನಂದಿಗದ್ದೆ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಜನಾರ್ದನ ಹೆಗಡೆ,ಗುಂದ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಫಕೀರಪ್ಪ ದರಿಗೊಂಡ, ನಂದಿಗದ್ದೆ ಶಾಲೆಯ ಮುಖ್ಯ ಶಿಕ್ಷಕರು,ಸಹ ಶಿಕ್ಷಕರು, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು, ಪಾಲಕರು,ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.
