ಸುದ್ದಿ ಕನ್ನಡ ವಾರ್ತೆ

. ಜೋಯಿಡಾ:ತಾಲೂಕಿನ ಉಳವಿಯಲ್ಲಿ ಜಿಲ್ಲಾ ಪಂಚಾಯತ ಉತ್ತರಕನ್ನಡ, ತಾಲೂಕು ಪಂಚಾಯತ ಜೋಯಿಡಾ, ಸಾರ್ವಜನಿಕ ಶಿಕ್ಷಣ ಇಲಾಖೆ ಜೋಯಿಡಾ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ,ಶೈಕ್ಷಣಿಕ ಜಿಲ್ಲೆ ಶಿರಸಿ,ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ ನಂದಿಗದ್ದೆ, ಶ್ರೀಚನ್ನಬಸವೇಶ್ವರ ಪ್ರೌಢಶಾಲೆ ಉಳವಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜೋಯಿಡಾ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ 2025-26 ರ ಕಾರ್ಯಕ್ರಮದಲ್ಲಿ ನಂದಿಗದ್ದೆ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ವಿದ್ಯಾರ್ಥಿನಿಯಾದ ಹಿರಿಯರ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ಕುಮಾರಿ ಹೇಮಾವತಿ ಮಂಜುನಾಥ ಸಾವರಕರ,ಚಿತ್ರಕಲೆ,(ಪ್ರಥಮ) ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಈ ವಿದ್ಯಾರ್ಥಿನಿಯ ಸಾಧನೆಗೆ ನಂದಿಗದ್ದೆ ಗ್ರಾಮ ಪಂಚಾಯತದ ಸದಸ್ಯರಾದ ಧವಳೋ ಗಣೇಶ ಸಾವರ್ಕರ್, ಪಾಲಕರಾದ ಮಂಜುನಾಥ ಸಾವರಕರ,ರಂಜನಾ ಸಾವರಕರ,ಕುಟುಂಬ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.