Banner Ad

ಸುದ್ದಿ ಕನ್ನಡ ವಾರ್ತೆ

ನವದೆಹಲಿ:ಉತ್ತರಕನ್ನಡ ಜಿಲ್ಲೆಯ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿರವರು ನವದೆಹಲಿಯಲ್ಲಿ ಕೇಂದ್ರ ದೂರ ಸಂಪರ್ಕ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು ಭೇಟಿಯಾಗಿ, ತಮ್ಮ ಕ್ಷೇತ್ರದ ನೆಟ್‌ವರ್ಕ್ ರಹಿತ ಪ್ರದೇಶಗಳ ಹಳ್ಳಿಗಳಿಂದ ಬಂದ ಸಾರ್ವಜನಿಕರ ಮನವಿಗಳನ್ನು ಪುರಸ್ಕರಿಸಿ ಮೊಬೈಲ್ ಸಂಪರ್ಕವಿಲ್ಲದ ಭಾಗಗಳಿಗೆ BSNL 4G ಟವರ್‌ಗಳನ್ನು ಮಂಜೂರು ಮಾಡುವಂತೆ ವಿನಂತಿಸಿದರು.

Banner Ad

ಡಿಜಿಟಲ್ ಯುಗದಲ್ಲಿ ಪ್ರತಿಯೊಬ್ಬರಿಗೂ ತಂತ್ರಜ್ಞಾನದ ಸೌಲಭ್ಯ ಸಿಗಬೇಕು ಎನ್ನುವ ನಮ್ಮ ಆಶಯಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮಾಹಿತಿ ನೀಡಿರುತ್ತಾರೆ.

Banner Ad