ಸುದ್ದಿ ಕನ್ನಡ ವಾರ್ತೆ

ಭಟ್ಕಳ: ಶ್ರೀ ದುರ್ಗಾದೇವಿ ಚಾರಿಟೇಬಲ್ ಟ್ರಸ್ಟ್ ನ 13ನೆಯ ವರ್ಷದ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮದ ಪ್ರಯುಕ್ತ, ಗೋಕರ್ಣ ಪರ್ತಗಾಳಿ ಶ್ರೀ ಜೀವೋತ್ತಮ ಮಠಾಧೀಶರಾದ ಶ್ರೀ ಶ್ರೀ ಶ್ರೀಮದ್ ವಿದ್ಯಾಧೀಶತೀರ್ಥ ಸ್ವಾಮಿಯವರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು  ತಿಮ್ಮಪ್ಪ ಹೊನ್ನಿಮನೆ, ಟ್ರಸ್ಟಿಗಳಾದ  ನಾರಾಯಣ ದೈಮನೆ,  ಹನುಮಂತ ನಾಯ್ಕ್,  ಅರವಿಂದ ಪೈ, ಮಾರಿಜಾತ್ರಾ ಅಧ್ಯಕ್ಷರಾದ  ರಾಮ ಮೊಗೇರ, ಚಾರಿಟೇಬಲ್ ಟ್ರಸ್ಟ್ ನ ಕೋಶಾಧಿಕಾರಿ  ಮಂಜುನಾಥ ಕೋಡಿಹಿತ್ಲು ಮತ್ತು ಚಾರಿಟೇಬಲ್ ಟ್ರಸ್ಟಿನ ಸದಸ್ಯರು ಹಾಗೂ ಮಾರಿಜಾತ್ರಾ ಸಮಿತಿ ಸದಸ್ಯರು ಹಾಜರಿದ್ದರು.

 

ಭಟ್ಕಳ ತಾಲೂಕಿನ ಅಳ್ವೆಕೋಡಿಯ ಧರ್ಮಾರ್ಥ ಸಭಾಭವನದಲ್ಲಿ, ಶ್ರೀ ದುರ್ಗಾದೇವಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ  ಮತ್ತು ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ್ ಮಠಾಧೀಶರಾದ ಶ್ರೀ ಶ್ರೀ ಶ್ರೀಮದ್ ವಿದ್ಯಾದೀಶ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿದ 13 ನೇ ವರ್ಷದ ಎಸ್ಸೆಸ್ಸೆಲ್ಸಿ ಯಲ್ಲಿ 90% ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುಗಳ ಆಶೀರ್ವಾದವನ್ನು ಪಡೆದುಕೊಂಡು ವಿದ್ಯಾರ್ಥಿಗಳಿಗೆ ಶುಭ ಹಾರೈಸಲಾಯಿತು.
.
.