ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಎಲ್ಲಾ ಗ್ರಾಮಗಳ 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೆ ಡಿಸೆಂಬರ್ 21 ರ ಭಾನುವಾರ ರಂದು ತಪ್ತದೇ ಪೋಲಿಯೋ ಲಸಿಕೆ ಹಾಕಿಸಿ ಎಂದು ನಂದಿಗದ್ದೆ ಗ್ರಾಮ ಪಂಚಾಯತ ಸದಸ್ಯರಾದ ಧವಳೋ ಗಣೇಶ ಸಾವರ್ಕರ್ ಮಾಧ್ಯಮದ ಮೂಲಕ ವಿನಂತಿಸಿಕೊಂಡಿದ್ದಾರೆ.

ಭಾರತವು ಪೋಲಿಯೋ ಮುಕ್ತ ದೇಶವಾಗಿದೆ.ಆದರೆ ಕೆಲವು ದೇಶಗಳಲ್ಲಿ ಪೋಲಿಯೋ ಇನ್ನೂ ಭೀತಿಯನ್ನುಂಟುಮಾಡುತ್ತಿದ್ದು, ನಿಮ್ಮ ಮಗುವಿಗೆ ಪ್ರತಿ ಬಾರಿಯೂ 2 ಹನಿ ಪೋಲಿಯೋ ಲಸಿಕೆ ಹಾಕಿಸಿ,ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಿ.ಪೋಲಿಯೋ ವಿರುದ್ದ ಭಾರತ ಸಾಧಿಸಿರುವ ಗೆಲುವನ್ನು ಮುಂದುವರಿಸಲು ಎಲ್ಲರೂ ಕೈಜೋಡಿಸಿ,ಶಾಶ್ವತ ಅಂಗವಿಕಲತೆಯನ್ನು ತರಬಲ್ಲ ಪೋಲಿಯೋವನ್ನು ಲಸಿಕೆಯ ಮೂಲಕ ಪ್ರತಿರೋಧಿಸೋಣ ಎಂದು ಮಾಧ್ಯಮದ ಮೂಲಕ ತಿಳಿಸಿದ್ದಾರೆ.