ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ ಹಾಗೂ ಬನವಾಸಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ಎನ್.ಡಿ.ಆರ್.ಎಫ್ (NDRF) ಮತ್ತು ಎಸ್.ಡಿ.ಆರ್.ಎಫ್ (SDRF) ಯೋಜನೆಯಡಿ ಒಟ್ಟು 17 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ.
ಇತ್ತೀಚಿನ ಭಾರೀ ಮಳೆಯ ಪರಿಣಾಮವಾಗಿ ರಸ್ತೆ, ಸೇತುವೆ, ಕಾಲುವೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಉಂಟಾದ ಹಾನಿಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು, ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಸರ್ಕಾರದ ಗಮನ ಸೆಳೆದಿದ್ದರು. ಇದರ ಪರಿಣಾಮವಾಗಿ ತುರ್ತು ಹಾಗೂ ಅಗತ್ಯ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗಿದೆ.
ಈ ಅನುದಾನದಿಂದ ಮಳೆ ಹಾನಿಗೊಳಗಾದ ಪ್ರದೇಶಗಳಲ್ಲಿ ಪುನಶ್ಚೇತನ ಕಾರ್ಯಗಳಿಗೆ ವೇಗ ದೊರೆಯಲಿದ್ದು, ಸಾರ್ವಜನಿಕರ ದಿನನಿತ್ಯದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಸಿಗಲಿದೆ.
