Banner Ad

ಸುದ್ದಿ ಕನ್ನಡ ವಾರ್ತೆ

. ಶಿರಸಿ: ಉತ್ತರಕನ್ನಡ ಜಿಲ್ಲೆಯ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಶಿರಸಿಯಲ್ಲಿ ಕೃಷಿ ಇಲಾಖೆ, ತಾಲೂಕು ಕೃಷಿಕ ಸಮಾಜ, ಧಾರವಾಡದ ಕೃಷಿ ವಿಶ್ವವಿದ್ಯಾಲಯ, ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ಹಾಗೂ ಅರಣ್ಯ ಮಹಾವಿದ್ಯಾಲಯ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ “ರೈತ ದಿನಾಚರಣೆ” ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾಜಿ ಪ್ರಧಾನಿ ದಿ. ಚೌಧರಿ ಚರಣ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

Banner Ad

ಈ ಕಾರ್ಯಕ್ರಮದಲ್ಲಿ ‘ಆತ್ಮ’ ಯೋಜನೆಯಡಿ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ವಿಜೇತ ರೈತರಿಗೆ ಸನ್ಮಾನಿಸಿ ಗೌರವಿಸಿ,ಇದೇ ವೇಳೆ 2047ರ ಹೊತ್ತಿಗೆ ಸಮೃದ್ಧ ಭಾರತವನ್ನು ನಿರ್ಮಿಸುವ ಗುರಿಯುಳ್ಳ “ವಿಕಸಿತ ಭಾರತ” ಹಸ್ತಪ್ರತಿಯನ್ನು ಬಿಡುಗಡೆಗೊಳಿಸಿ, ರೈತ ಬಾಂಧವರೊಂದಿಗೆ ಸುಸ್ಥಿರ ಕೃಷಿಯ ಕುರಿತು ವಿಚಾರ ವಿನಿಮಯ ಮಾಡಿದರು. ಈ ಸಂದರ್ಭದಲ್ಲಿ ಗಣ್ಯರು,ಕೃಷಿಕ ಸಮಾಜದವರು,ಅಧಿಕಾರಿ ವರ್ಗದವರು,ರೈತ ಬಾಂಧವರು,ಅರಣ್ಯ ಮಹಾವಿದ್ಯಾಲಯದ ಪ್ರಾಚಾರ್ಯರು,ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Banner Ad