ಸುದ್ದಿ ಕನ್ನಡ ವಾರ್ತೆ

ಯಲ್ಲಾಪುರ: ತಾಲೂಕಿನ ಗುಳ್ಳಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಟ್ರಕ್ ಒಂದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿ ಅಪಘಾತ ಸಂಭವಿಸಿದೆ.

ಈ ಘಟನೆ ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ಸಂಭವಿಸಿದೆ. ಅಂಗಡಿ ಬಂದ್ ಆಗಿದ್ದರಿಂದ ಪ್ರಾಣ ಹಾನಿ ತಪ್ಪಿದಂತಾಗಿದೆ.

ಅರಬೈಲ್ ಘಟ್ಟ ಪ್ರದೇಶದಲ್ಲಿ ಕೂಡ ವಾಹನ ಸವಾಲು ಬಹುವೇಗದಿಂದ ವಾಹನ ಚಲಾಯಿಸುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಗುಳ್ಳಾಪುರದಲ್ಲಿ ಸಂಭವಿಸಿದ ಅಪಘಾತ ಕೂಡ ಅತಿ ವೇಗದ ವಾಹನ ಚಲಾಯಿಸಿರುವುದೇ ಕಾರಣ ಎಂದೇ ಹೇಳಲಾಗುತ್ತಿದೆ.