ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ಕಾರವಾರ ನಗರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಪ್ರವಾಸೋದ್ಯಮ ಇಲಾಖೆ ಯೋಜನೆ,ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ,ಜಿಲ್ಲಾಡಳಿತ ಉತ್ತರಕನ್ನಡ ಇವರ ಸಹಯೋಗದೊಂದಿಗೆ ಕರಾವಳಿ ಉತ್ಸವ 2025ರ ಅಂಗವಾಗಿ ಇಲ್ಲಿನ ಕಡಲತೀರದ ಮಯೂರವರ್ಮ ವೇದಿಕೆಯಲ್ಲಿ ಶನಿವಾರ ಸಂಜೆ ನಡೆದ 5 ನೇ ದಿನದ ಸ್ಥಳೀಯ ಕಲಾವಿದರ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದ ಪ್ರೇಕ್ಷಕರ ಮನಸೂರೆಗೊಂಡವು.
ಈ ಸಂದರ್ಭದಲ್ಲಿ ಕವಿ,ಕಾವ್ಯ,ಕುಂಚ ಗಾಯನ ಕಾರ್ಯಕ್ರಮದಲ್ಲಿ ಜೋಯಿಡಾ ತಾಲೂಕಿನ ಹಿಂದೂಸ್ತಾನಿ ಗಾಯಕರಾದ ಸುಧಾಮ ದಾನಗೇರಿ ಮತ್ತು ಅವರ ಸಂಗಡಿಗರಿಂದ ಹಾಗೂ ಕವನ ವಾಚನ ಕಾರ್ಯಕ್ರಮದಲ್ಲಿ ಸೀತಾ ದಾನಗೇರಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸದಸ್ಯರು ಭಾಗವಹಿಸಿದ್ದ ಕಾರ್ಯಕ್ರಮವು ನೆರೆದಿದ್ದ ಪ್ರೇಕ್ಷಕರ ಮನಸೊರೆಗೊಂಡಿತು.
