ಸುದ್ದಿ ಕನ್ನಡ ವಾರ್ತೆ

ಹಿರಿಯ ಪತ್ರಕರ್ತರು, ನಿವೃತ್ತ ಪ್ರಾಚಾರ್ಯರು, ದಾಂಡೇಲಿ ತಾಲೂಕ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರು,ದಾಂಡೇಲಿ ಕರ್ನಾಟಕ ಸಂಘದ ಅಧ್ಯಕ್ಷರು ಹಾಗೂ ಲಯನ್ಸ್ ಕ್ಲಬ್ ಸೇರಿದಂತೆ ಅನೇಕ ಸಂಘ–ಸಂಸ್ಥೆಗಳ ಸಕ್ರಿಯ ಪದಾಧಿಕಾರಿಗಳಾಗಿದ್ದ ಶ್ರೀ ಯು.ಎಸ್. ಪಾಟೀಲ್ ಅವರ ಅಗಲಿಕೆಯ ಸುದ್ದಿ ಅತ್ಯಂತ ದುಃಖಕರವಾಗಿದೆ ಎಂದು ಶಾಸಕ ಆರ್ ವಿ ದೇಶಪಾಂಡೆ ಶೋಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಪತ್ರಿಕಾ ರಂಗ,ಶಿಕ್ಷಣ ಕ್ಷೇತ್ರ, ಸಾಹಿತ್ಯ ಮತ್ತು ಸಾಮಾಜಿಕ ಸೇವೆಯ ಮೂಲಕ ಅವರು ಸಮಾಜಕ್ಕೆ ಅಪಾರ ಕೊಡುಗೆ ನೀಡಿದವರು. ಕನ್ನಡ ಭಾಷೆ,ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉತ್ತೇಜನಕ್ಕೆ ತಮ್ಮ ಜೀವನವನ್ನೇ ಅರ್ಪಿಸಿದ ಅವರು ಸರಳ,ಸೌಮ್ಯ ಮತ್ತು ಜನಾನುರಾಗಿಯಾಗಿದ್ದರು.
ಅನೇಕ ಯುವಪತ್ರಕರ್ತರು, ವಿದ್ಯಾರ್ಥಿಗಳು ಹಾಗೂ ಸಮಾಜಮುಖಿ ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿ ಪ್ರೇರಣೆಯಾಗಿದ್ದರು.

ಅವರ ಅಗಲಿಕೆ ದಾಂಡೇಲಿ ತಾಲೂಕಿಗೆ ಮಾತ್ರವಲ್ಲದೆ ಉತ್ತರ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ಹಾಗೂ ಪತ್ರಿಕಾ ವಲಯಕ್ಕೆ ತುಂಬಲಾರದ ನಷ್ಟವಾಗಿದೆ.ಅವರ ಸೇವೆ, ಆದರ್ಶಗಳು ಹಾಗೂ ಮೌಲ್ಯಗಳು ಸದಾ ನಮ್ಮನ್ನು ಪ್ರೇರೇಪಿಸುತ್ತವೆ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಾಸಕ ಆರ್ ಬಿ ದೇಶಪಾಂಡೆ ಸಂತಾಪ ಸೂಚಿಸಿದ್ದಾರೆ.