ಸುದ್ದಿ ಕನ್ನಡ ವಾರ್ತೆ
ಮುಂಡಗೋಡ:ಉತ್ತರಕನ್ನಡ ಜಿಲ್ಲೆಯ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮುಂಡಗೋಡಿನ ಟಿಬೆಟಿಯನ್ ಕಾಲೋನಿಯಲ್ಲಿ ನಡೆದ ಪರಮಪೂಜ್ಯ 14ನೇ ದಲೈಲಾಮರವರ 90ನೇ ಜನ್ಮ ದಿನಾಚರಣೆಯ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ, ವಿಶ್ವಕ್ಕೆ ಶಾಂತಿ ಮತ್ತು ಅಹಿಂಸೆಯ ಸಂದೇಶ ಸಾರುವ ದಲೈಲಾಮರವರಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳನ್ನು ಕೋರಿ, ಅವರ ಆಶೀರ್ವಾದ ಪಡೆದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಕಿರಣ್ ರಿಜಿಜು ಅವರು ಉಪಸ್ಥಿತರಿದ್ದರು.
