ಸುದ್ದಿ ಕನ್ನಡ ವಾರ್ತೆ
ಶಿರಸಿ ಮಾರಿಕಾಂಬಾ ಜಾತ್ರೆಯ ಪ್ರಯುಕ್ತ ಸಾರ್ವಜನಿಕರ ಹಿತದೃಷ್ಟಿಯಿಂದ ಸಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯನ್ನು ಡಿಸೇಂಬರ್ 30 2025ರಿಂದ ಸಂಚಾರಕ್ಕೆ ಮುಕ್ತಗೊಳಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸಾರ್ವಜನಿಕರ ಅನುಕೂಲಕ್ಕಾಗಿ ಈ ಕ್ರಮ ಕೈಗೊಂಡ ಜಿಲ್ಲಾಧಿಕಾರಿಗಳ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ರಸ್ತೆಯ ಕೆಲವು ಭಾಗಗಳಲ್ಲಿ ಇನ್ನೂ ಕಾಮಗಾರಿ ನಡೆಯುತ್ತಿರುವುದರಿಂದ, ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸಿ ಸುರಕ್ಷಿತವಾಗಿ ಪ್ರಯಾಣಿಸಬೇಕೆಂದು ಈ ಮೂಲಕ ಜನತೆಯಲ್ಲಿ ವಿನಂತಿಸಿಕೊಂಡಿದ್ದಾರೆ.
