ಸುದ್ದಿ ಕನ್ನಡ ವಾರ್ತೆ

ಹುಲೆಕಲ್: ಡಿಸೆಂಬರ್ 29ರಂದು ಶ್ರೀ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀದೇವಿ ಶಿಕ್ಷಣ ಸಂಸ್ಥೆ (ರಿ), ಶ್ರೀದೇವಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ, ಹುಲೆಕಲ್ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಭಕ್ತಿಭಾವ ಹಾಗೂ ಉತ್ಸಾಹದಿಂದ ನಡೆಯಿತು.

ಈ ಕಾರ್ಯಕ್ರಮವು ಶ್ರೀದೇವಿ ಶಿಕ್ಷಣ ಸಂಸ್ಥೆ ಹುಲೆಕಲ್‌ನ ಗೌರವಾಧ್ಯಕ್ಷರು ಹಾಗೂ ಮಹಾಪೋಷಕರಾದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾನ್ಯ ವಿಧಾನ ಪರಿಷತ್ತಿನ ಸದಸ್ಯರಾದ ಶಾಂತಾರಾಮ ಸಿದ್ದಿ ಸೇರಿದಂತೆ ಅತಿಥಿಯಾಗಿ ಭಾಗವಹಿಸಿದವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇರಣಾದಾಯಕವಾಗಿ ಮಾತನಾಡಿ, ಶಿಸ್ತು, ವಿದ್ಯಾಭ್ಯಾಸ ಮತ್ತು ಸಂಸ್ಕಾರಗಳ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು, ಹಿರಿಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ, ಪಾಲಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ವಿಶೇಷ ಶೋಭೆ ತಂದರು. ವಾರ್ಷಿಕ ಸ್ನೇಹ ಸಮ್ಮೇಳನವು ವಿದ್ಯಾರ್ಥಿಗಳ ಪ್ರತಿಭೆ, ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಸಹಬಾಳ್ವೆಯ ಮನೋಭಾವವನ್ನು ಉತ್ತೇಜಿಸುವ ವೇದಿಕೆಯಾಗಿತ್ತು.