ಸುದ್ದಿ ಕನ್ನಡ ವಾರ್ತೆ
ಶಿರಸಿ:ಉತ್ತರಕನ್ನಡ ಜಿಲ್ಲೆಯ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಶಿರಸಿ ತಾಲೂಕಿನ ಹೆಗಡೆಕಟ್ಟಾ ಗ್ರಾಮದ ಹೊನ್ನೆಕಟ್ಟೆಯಲ್ಲಿ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು (PMMSY) ಅತ್ಯಂತ ಸಮರ್ಪಕವಾಗಿ ಬಳಸಿಕೊಂಡು ಒಳನಾಡು ಮೀನುಗಾರಿಕೆಯಲ್ಲಿ ಮಾದರಿ ಸಾಧನೆ ಮಾಡುತ್ತಿರುವ ಕುಸುಮ ಶ್ರೀಧರ ಹೆಗಡೆ ಅವರ ಮೀನು ಸಾಕಣೆ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ವೀಕ್ಷಿಸಿದರು.
ಕುಸುಮ ಅವರು ತಮ್ಮ ಮಕ್ಕಳ ಸಕ್ರಿಯ ಸಹಕಾರದೊಂದಿಗೆ ವೈಜ್ಞಾನಿಕ ಪದ್ಧತಿಯಲ್ಲಿ ಒಳನಾಡು ಮೀನುಗಾರಿಕೆಯನ್ನು ಅಳವಡಿಸಿಕೊಂಡಿದ್ದಾರೆ. ಸಾಂಪ್ರದಾಯಿಕ ಕೃಷಿಯೊಂದಿಗೆ ಮೀನುಗಾರಿಕೆಯನ್ನು ಉಪಕಸುಬಾಗಿ ಮಾಡಿಕೊಂಡು, ಉತ್ತಮ ಆರ್ಥಿಕ ಆದಾಯ ಗಳಿಸುವ ಮೂಲಕ ಅವರು ಈ ಭಾಗದ ಇತರ ರೈತರಿಗೂ ಸ್ಫೂರ್ತಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಈ ಯೋಜನೆಯು ಪ್ರಾರಂಭವಾದಾಗಿನಿಂದ ಈವರೆಗೆ ನಮ್ಮ ಜಿಲ್ಲೆಯಲ್ಲಿ ಒಟ್ಟು 275 ಫಲಾನುಭವಿಗಳು ವಿವಿಧ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಿರುವುದು ಹೆಮ್ಮೆಯ ವಿಷಯ.
