ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ರಾಮನಗರದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 2025-26ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ದಿನಾಂಕ 31-12-2025ರಂದು ಅತ್ಯಂತ ಉತ್ಸಾಹ ಹಾಗೂ ಸಡಗರದಿಂದ ಯಶಸ್ವಿಯಾಗಿ ಆಯೋಜಿಸಲಾಯಿತು.
ಕ್ರೀಡಾಕೂಟದ ಉದ್ಘಾಟನೆಯನ್ನು ಶಾಲೆಯ ಪ್ರಾಂಶುಪಾಲರಾದ ಬಸಪ್ಪ ಮಲ್ಲೂರ್ ಅವರು ನೆರವೇರಿಸಿ, ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭಕೋರಿದರು. ಈ ಸಂದರ್ಭದಲ್ಲಿ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಸನ್ಮಾನ ಮಾಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದ ಯಶಸ್ಸಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ ಬೀರನಹೊಳಿ, ಹಾಗೂ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಸಹಕಾರ ನೀಡಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದರು. ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ, ಶಿಸ್ತು ಮತ್ತು ಸಹಕಾರದ ಮನೋಭಾವವನ್ನು ಬೆಳೆಸುವಲ್ಲಿ ಈ ಕ್ರೀಡಾಕೂಟ ಮಹತ್ವದ ಪಾತ್ರ ವಹಿಸಿತು.
