ಸುದ್ದಿ ಕನ್ನಡ ವಾರ್ತೆ

. ಯಲ್ಲಾಪುರದಲ್ಲಿ ಇಂದು ನಡೆದ ದಲಿತ ಮಹಿಳೆ ರಂಜಿತಾ ಮಲ್ಲಪ್ಪ ಬನ್ನೋಡೆ ಅವರ ಧಾರುಣ ಕೊಲೆ ಕೃತ್ಯವು ಅತ್ಯಂತ ಖೇದಕರ ಮತ್ತು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಯಾಗಿದೆ. ಈ ಭೀಕರ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಂಸದ ಕಾಗೇರಿ ತಿಳಿಸಿದ್ದಾರೆ.

ನಮ್ಮ ಜಿಲ್ಲೆಯಲ್ಲಿ ಇಂತಹ ಅಮಾನವೀಯ ಘಟನೆಗಳು ಮರುಕಳಿಸದಂತೆ ತಡೆಯುವುದು ತುರ್ತು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಾನು ಈಗಾಗಲೇ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ (SP) ಮಾತನಾಡಿದ್ದೇನೆ, ಸಾರ್ವಜನಿಕರ ರಕ್ಷಣೆ ಮತ್ತು ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಶೀಘ್ರವಾಗಿ ತನಿಖೆ ಮಾಡಿ, ನ್ಯಾಯ ಒದಗಿಸಬೇಕು ಎಂದು ಸೂಚಿಸಿದ್ದೇನೆ.

ಈ ಭೀಕರ ಕೃತ್ಯವೆಸಗಿದ ಆರೋಪಿ ರಫಿಕ್ ನನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಶಿಕ್ಷೆಗೆ ಗುರಿಪಡಿಸಬೇಕು ಎಂದು ನಾನು ಪೊಲೀಸ್‌ ಇಲಾಖೆಯನ್ನು ಆಗ್ರಹಿಸುತ್ತಿದ್ದೇನೆ.

ಶೋಕದಲ್ಲಿರುವ ಆ ಕುಟುಂಬದ ಸದಸ್ಯರಿಗೆ ಈ ಆಘಾತವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.