ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ನಂದಿಗದ್ದೆ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ,ಜೋಯಿಡಾ,ಶಾಲಾ ಎಸ್ ಡಿ ಎಂ ಸಿ,ಪಾಲಕರ, ಪೋಷಕರ, ಶಿಕ್ಷಕ ವೃಂದದವರ ಸಹಕಾರ, ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ 10 ಜನವರಿ 2026ರ ಶನಿವಾರ ಮಧ್ಯಾಹ್ನ 3-00 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದಲ್ಲಿ ನಡೆಯಲಿದೆ.
ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ವ್ಯವಹಾರಿಕ ಜ್ಞಾನ ನೀಡುವ ಈ ಕಾರ್ಯಕ್ರಮಕ್ಕೆ ಮುಖ್ಯ ಶಿಕ್ಷಕರು,ಸಹ ಶಿಕ್ಷಕರು,ವಿದ್ಯಾರ್ಥಿಗಳು,ಸಿಬ್ಬಂದಿ ವರ್ಗ,ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು,ಪಾಲಕರು,ಪೋಷಕರು ಸರ್ವರಿಗೂ ಹೃತ್ಪೂರ್ವಕ ಸ್ವಾಗತವನ್ನು ಕೋರಿದ್ದಾರೆ.
