ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ,ಜೋಯಿಡಾ,ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ,ಪ್ರಧಾನಿ, ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಪ್ರಧಾನಿ ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಪ್ರಧಾನಿ ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬ 12 ಜನವರಿ 2026 ರ,ಸೋಮವಾರ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಪ್ರಧಾನಿ ಶಾಲೆಯಲ್ಲಿ FLN ಕಲಿಕಾ ಹಬ್ಬ ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 9-00ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಸರ್ವರಿಗೂ ಆದರದ ಸ್ವಾಗತವನ್ನು ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು ಎಸ್ ಡಿ ಎಂ ಸಿ, ಮುಖ್ಯಶಿಕ್ಷಕರು,ಸಹ ಶಿಕ್ಷಕರು ,ವಿದ್ಯಾರ್ಥಿ ವೃಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಧಾನಿ.ಸಮೂಹ ಸಂಪನ್ಮೂಲ ವ್ಯಕ್ತಿಗಳು,ಪ್ರಧಾನಿ ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು,ಸಹ ಶಿಕ್ಷಕ ವೃಂದದವರು,ಸಮಸ್ತ ವಿದ್ಯಾರ್ಥಿ ವೃಂದದವರು ಕೋರಿದ್ದಾರೆ.