ಸುದ್ದಿ ಕನ್ನಡ ವಾರ್ತೆ
. ಜೋಯಿಡಾ:ತಾಲೂಕಿನ ರಾಮನಗರ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ರಾಮನಗರ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ ರಾಮನಗರ, ಶಾಲಾ ಎಸ್ ಡಿ ಎಂ ಸಿ,ಪಾಲಕರ, ಪೋಷಕರ, ಶಿಕ್ಷಕ ವೃಂದದವರ ಸಹಕಾರ, ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಲ್ಲಿ ಗ್ರಾಹಕ ದಿನದ ಅಂಗವಾಗಿ ಮೆಟ್ರಿಕ್ ಮೇಳ ಕಾರ್ಯಕ್ರಮ 13 ಜನವರಿ 2026ರ ಮಂಗಳವಾರ ಬೆಳಿಗ್ಗೆ 10-00 ರಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದಲ್ಲಿ ನಡೆಯಲಿದೆ.
ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ವ್ಯವಹಾರಿಕ ಜ್ಞಾನ ಬೆಳೆಸುವುದು,ಮಕ್ಕಳಿಗೆ ಅಳತೆ,ತೂಕ,ಲಾಭ ನಷ್ಟದ ಅರಿವು ಮೂಡಿಸುವ ಈ ಕಾರ್ಯಕ್ರಮಕ್ಕೆ ಮುಖ್ಯ ಶಿಕ್ಷಕರು,ಸಹ ಶಿಕ್ಷಕರು,ವಿದ್ಯಾರ್ಥಿಗಳು,ಸಿಬ್ಬಂದಿ ವರ್ಗ,ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು,ಪಾಲಕರು,ಪೋಷಕರು ಸರ್ವರಿಗೂ ಹೃತ್ಪೂರ್ವಕ ಸ್ವಾಗತವನ್ನು ಕೋರಿದ್ದಾರೆ.
