ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಅವೇಡಾ ಗ್ರಾಮ ಪಂಚಾಯತ ವ್ಯಾಪ್ತಿಯ ಮಾವಳಂಗಿ ಗ್ರಾಮದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ 2024-25 ನೇ ಸಾಲಿನ ಡಾಂಬರ್ ರಸ್ತೆಯ ನಿರ್ಮಾಣ ಕಾಮಗಾರಿಯ ಉದ್ಘಾಟನೆಯನ್ನು ಮಾನ್ಯ ಶಾಸಕರು,ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್ ವಿ ದೇಶಪಾಂಡೆಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಾರುತಿ ಪಾಟೀಲ,ಕೆ ಪಿ ಸಿ ಸಿ ಸದಸ್ಯರಾದ ಸದಾನಂದ ದಬಗಾರ,ಅವೇಡಾ ಗ್ರಾಮ ಪಂಚಾಯತ ಅಧ್ಯಕ್ಷರಾದ ಅರುಣ ಭಗವತಿರಾಜ್, ಉಪಾಧ್ಯಕ್ಷೆ ಲಕ್ಷ್ಮೀ ಮುರಾರಿ,ಸದಸ್ಯರಾದ ಅಜಿತ್ ಥೋರವತ,ರೇಣುಕಾ ಗದ್ದಿ,ಮಹಮ್ಮದ್ ಗವ್ಸ್ ಅಮ್ಮಿನಭಾವಿ,ಉದ್ಯಮಿ ಅನಿಲ ಪಾಟ್ನೇಕರ,ಅವೇಡಾ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಲೀನಾ ನಾಯ್ಕ,ತಾಲೂಕಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಅಧಿಕಾರಿ ವರ್ಗದವರು,ಗ್ರಾಮಸ್ಥರು ಉಪಸ್ಥಿತರಿದ್ದು,ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಸಹಕಾರಿಯಾಗಿರುವ ಈ ಕಾಮಗಾರಿಯನ್ನು ಸ್ವಾಗತಿಸಿದರು.
