ಸುದ್ದಿ ಕನ್ನಡ ವಾರ್ತೆ
ಸಿದ್ದಾಪುರ: ತಾಲೂಕಿನ ಉತ್ತರ ಕನ್ನಡ ಜಿಲ್ಲಾ ಕಂದಾಯ ಇಲಾಖೆಯಲ್ಲಿನ ದಕ್ಷ ಆಡಳಿತ ಮತ್ತು ಜನಪರ ಸೇವೆಗಾಗಿ ಸಿದ್ದಾಪುರ ತಹಶೀಲ್ದಾರ್ ಎಂ.ಆರ್. ಕುಲಕರ್ಣಿ ಅವರು 2026ನೇ ಸಾಲಿನ ಪ್ರತಿಷ್ಠಿತ ಜಿಲ್ಲಾ ಮಟ್ಟದ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.
ತಹಶೀಲ್ದಾರ ಹಾಗೂ ತಾಲೂಕಾ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಸಿದ್ದಾಪುರ
ತಾಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ವಿಲೆವಾರಿ ಮಾಡುವುದು, ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸುವುದು ಹಾಗೂ ಇಲಾಖಾ ಮಟ್ಟದಲ್ಲಿ ತೋರಿದ ಅತ್ಯುತ್ತಮ ಕಾರ್ಯವೈಖರಿಯನ್ನು ಪರಿಗಣಿಸಿ ಜಿಲ್ಲಾಡಳಿತ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಜಿಲ್ಲಾ ಕೇಂದ್ರವಾದ ಕಾರವಾರದಲ್ಲಿ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಎಂ.ಆರ್. ಕುಲಕರ್ಣಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ತಹಶೀಲ್ದಾರ್ ಅವರ ಈ ಸಾಧನೆಗೆ ತಾಲೂಕಿನ ಸಾರ್ವಜನಿಕ ವಲಯದಿಂದ ಹಾಗೂ ಇಲಾಖಾ ಸಿಬ್ಬಂದಿ ವರ್ಗದಿಂದ ಅಭಿನಂದನೆಗಳು ವ್ಯಕ್ತವಾಗಿವೆ.
