ಸುದ್ದಿ ಕನ್ನಡ ವಾರ್ತೆ
ಕಾರವಾರ: ತಾಲೂಕಿನ ಡಾಂಬರ್ ಟ್ಯಾಂಕರ್ ಹಾಯ್ದು ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ರಾತ್ರಿ ನಡೆದಿದೆ.ಕಾರವಾರದಿಂದ ಅಂಕೋಲಾಕ್ಕೆ ತೆರಳುತಿದ್ದ ಡಾಂಬರ್ ಟ್ಯಾಂಕರ್ ದ್ವಿಚಕ್ರ ವಾಹನ ಸವಾರನ ತಲೆಯ ಮೇಲೆ ಹರಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಕಾರವಾರದ ದಿನಕರ
ಗುನಗಿ ಎಂದು ಗುರುತಿಸಲಾಗಿದ್ದು, ಡಿಡಿಪಿಐ ಕಚೇರಿಯಲ್ಲಿ ಕ್ಲರ್ಕ ಆಗಿ ಕೆಲಸ ಮಾಡುತ್ತಿದ್ದವರು ಎಂದು ತಿಳಿದುಬಂದಿದೆ.
ಚಾಲಕ ಟ್ಯಾಂಕರ್ ಬಿಟ್ಟು ಪಲಾಯನ ಮಾಡಲು ಪ್ರಯತ್ನಿಸಿದ್ದು, ಸಿನಿಮೀಯ ರೀತಿಯಲ್ಲಿ ಟ್ಯಾಂಕರ್ ಚಾಲಕನನ್ನು ಸಂಚಾರ ಠಾಣೆಯ ಪೋಲಿಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಘಟನೆ ಸಂಬಂಧ ಕಾರವಾರ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
