ಸುದ್ದಿ ಕನ್ನಡ ವಾರ್ತೆ

ಜೊಯಿಡಾ:ತಾಲೂಕಿನ ಗೋವಾ-ಬೆಳಗಾವಿ
ರಾಷ್ಟ್ರೀಯ ಹೆದ್ದಾರಿಯ ರಾಮನಗರ ಬಳಿ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.ಘಟನೆಯಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗೋವಾದಿಂದ ಹುಬ್ಬಳ್ಳಿ ಕಡೆ ತೆರಳುತ್ತಿದ್ದ ಇನ್ನೋವಾ ಕಾರು ಹಾಗೂ ಹುಬ್ಬಳ್ಳಿಯಿಂದ ಗೋವಾದತ್ತ ಹೋಗುತ್ತಿದ್ದ ರೆನಾಲ್ಟ್ ಕ್ವಿಡ್ ಕಾರುಗಳ ನಡುವೆ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ರೆನಾಲ್ಟ್ ಕ್ವಿಡ್ ಕಾರಿನಲ್ಲಿದ್ದ ರುದ್ರಯ್ಯ ಶಿವನವರ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೇಣುಕಾ ಹಿರೇಮಠ ಎಂಬುವರನ್ನು ರಾಮನಗರ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಳಿಕ ಮೃತಪಟ್ಟಿದ್ದಾರೆ. ಮೃತರು ಹುಬ್ಬಳ್ಳಿತಾಲೂಕಿನ ಲಕ್ಷೇಶ್ವರ ಪ್ರಸ್ತುತ ಗೋವಾದ ಫೊಂಡಾದಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ.ಅಪಘಾತದಲ್ಲಿ ಚಾಲಕ ಶಿವರಾಜ ಶಿವನವರ ಹಾಗೂ ಬಸವ ಶಿವನವರ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ರಾಮನಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಲೋಂಡಾ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಟ್ಟಿದ್ದು ರಾಮನಗರ ಪೊಲೀಸ್‌ ಠಾಣೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಹೆದ್ದಾರಿಯಲ್ಲಿ ಸಂಚಾರ ಸುಗಮಗೊಳಿಸಿದ್ದಾರೆ.