ಸುದ್ದಿ ಕನ್ನಡ ವಾರ್ತೆ
ಜೋಯಿಡಾ: ತಾಲೂಕಿನ ಉಳವಿಯ ಶ್ರೀ ಚನ್ನಬಸವೇಶ್ವರ
ದೇವರ ಮಹಾರಥೋತ್ಸವವು ಫೆಬ್ರವರಿ 3 ರಂದು ನಡೆಯಲಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮ ವಹಿಸುವ ಸಲುವಾಗಿ ಫೆ.2 ರ ಬೆಳಗ್ಗೆ 6 ಗಂಟೆಯಿಂದ ಫೆ.4 ರ ಬೆಳಿಗ್ಗೆ 6 ಗಂಟೆಯವರೆಗೆ ತಾಲೂಕಿನಾದ್ಯಂತ ಎಲ್ಲಾ ಮದ್ಯದಂಗಡಿ, ವೈನ್ ಶಾಪ್ ಬಂದ್ ಮಾಡುವಂತೆ ಹಾಗೂ ಮದ್ಯ ಸಾಗಾಟ ಹಾಗೂ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷಿಪ್ರಿಯಾ ಆದೇಶ ಹೊರಡಿಸಿದ್ದಾರೆ.