Banner Ad

ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಶ್ರೀ ಕ್ಷೇತ್ರ ಚೆನ್ನಬಸವಣ್ಣನ ಉಳವಿ ಜಾತ್ರೆಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರೀಯಾ ಅವರು ಭೇಟಿ ನೀಡಿ ದೇವರ ಆಶೀರ್ವಾದ ಪಡೆದು ಜಾತ್ರೆಯ ವೀಕ್ಷಣೆ ಮಾಡಿದರು.

ಜಾತ್ರೆಯ ಮಹಾರಥೋತ್ಸವ ಸೇರಿದಂತೆ,ಎಲ್ಲಾ ಕಾರ್ಯಕ್ರಮಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ, ಸುರಕ್ಷತೆ ಹಾಗೂ ಎಲ್ಲಾ ವ್ಯವಸ್ಥೆಗಳ ಬಗ್ಗೆ ವಿಚಾರಿಸಿದರು, ಸಿಸಿ ಕ್ಯಾಮರಾ ಹಾಗೂ ಕಾನೂನು ಸುವ್ಯವಸ್ಥೆ ಬಗ್ಗೆ ವಿಚಾರಿಸಿ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಜೋಯಿಡಾ ತಹಶಿಲ್ದಾರ ಮಂಜುನಾಥ ಮುನ್ನೋಳ್ಳಿ, ಉಳವಿ ಟ್ರಸ್ಟ್ ಕಮಿಟಿ ಅಧ್ಯಕ್ಷ ಸಂಜಯ ಕಿತ್ತೂರ, ಉಪಾಧ್ಯಕ್ಷ ಪ್ರಕಾಶ ಕಿತ್ತೂರ, ಉಳವಿ ಗ್ರಾಮ ಪಂಚಾಯತ ಅಧ್ಯಕ್ಷ ಮಂಜುನಾಥ ಮೋಕಾಶಿ, ಹಾಲಪ್ಪ ಚಕ್ರಸಾಲಿ ಇತರರು ಉಪಸ್ಥಿತರಿದ್ದರು.

Banner Ad
Banner Ad