ಸುದ್ದಿ ಕನ್ನಡ ವಾರ್ತೆ
ಜೋಯಿಡಾ : ತಾಲೂಕಿನ ಜೋಯಿಡಾ
ಗ್ರಾಮ ಪಂಚಾಯತ ವ್ಯಾಪ್ತಿಯ ಹುಡಸಾ ಗ್ರಾಮದ ಶ್ರೀ ಸೋಮೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಫೆ.6 ರಂದು ನಡೆಯಲಿದೆ.
ಅಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ವರೆಗೆ ರುದ್ರಾಭೀಷೇಕ, ಅಲಂಕಾರ, ಪೂಜೆ ನಡೆಯಲಿದೆ.ತೀರ್ಥ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ.ನಂತರ ಸಾರ್ವಜನಿಕ ಅನ್ನ ಪ್ರಸಾದ ವಿತರಣೆ, ರಾತ್ರಿ 10 ಗಂಟೆಗೆ ಸವಾಲ್ ಕಾರ್ಯಕ್ರಮ ನಡೆಯಲಿದೆ. ನಂತರ ಸ್ಥಳೀಯ ಕಲಾವಿದರಿಂದ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ.7ನೇ ತಾರಿಖೀನಿಂದ ಮೂರು ದಿನಗಳ ಕಾಲ ಗ್ರಾಮೀಣ ಕ್ರಿಕೆಟ್ ಪಂದ್ಯಾವಳಿಯೂ ನಡೆಯಲಿದೆ ಎಂದು ಓಂಕಾರ ಅಜಿತ ಟೇಂಗ್ಸೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
