Banner Ad

ಸುದ್ದಿ ಕನ್ನಡ ವಾರ್ತೆ
ಕಾರವಾರ: ನಗರದ ಬಿಲ್ಟ್ ವೃತ್ತದ
ಬಳಿ ಗುರುವಾರ ಮಧ್ಯಾಹ್ನ ನೌಕಾನೆಲೆ ಸಿಬ್ಬಂದಿಯೊಬ್ಬರ ಕಾರು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ.
ನೌಕಾನೆಲೆ ಸಿಬ್ಬಂದಿ ಗುನಾಜಿತ್ ಅವರು ತಮ್ಮ ಪುತ್ರನೊಂದಿಗೆ ಕಾರವಾರ ನಗರದಿಂದ ನೌಕಾನೆಲೆಯ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದರು. ಇದೇ ವೇಳೆ ಸವಣೂರಿನಿಂದ ಕಾರವಾರಕ್ಕೆ ಬರುತ್ತಿದ್ದ ಸಾರಿಗೆ ಬಸ್, ಬಿಲ್ಟ್ ವೃತ್ತದ ಬಳಿ ತಿರುವು ತೆಗೆದುಕೊಳ್ಳುವಾಗ ಈ ಅವಘಡ ಸಂಭವಿಸಿದೆ. ಕಾರು ರಭಸವಾಗಿ ಬಸ್‌ನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಏರ್‌ಬ್ಯಾಗ್‌ಗಳು ತೆರೆ ದುಕೊಂಡಿದ್ದರಿಂದ ಸಂಭವಿಸಬ ಹುದಾಗಿದ್ದ ದೊಡ್ಡ ಪ್ರಾಣಹಾನಿ ತಪ್ಪಿದೆ. ಅಪಘಾತದ ಬೆನ್ನಲ್ಲೇ ಕಾರಿನಿಂದ ಆಯಿಲ್ ಸೋರಿಕೆಆಗಲಾರಂಭಿಸಿದೆ. ಇದನ್ನು ಕಂಡ ಸಾರ್ವಜನಿಕರು ಆತಂಕಗೊಂಡು, ತಕ್ಷಣವೇ ಕಾರಿನಲ್ಲಿದ್ದ ಚಾಲಕ, ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗುನಾಜಿತ್ ಮತ್ತು ಅವರ ಪುತ್ರನನ್ನು ಹೊರತೆಗೆದು, ಕಾರಿನಲ್ಲಿದ್ದ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿ೦ದ ಪಾರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕಾರವಾರ ಸಂಚಾರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Banner Ad
Banner Ad