ಸುದ್ದಿ ಕನ್ನಡ ವಾರ್ತೆ
ಹಳಿಯಾಳ:ಜಿಲ್ಲಾಡಳಿತ,ಜಿಲ್ಲಾ
ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ,ಹಳಿಯಾಳ,ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ,ಹಳಿಯಾಳ, ಸಮೂಹ ಸಂಪನ್ಮೂಲ ಕೇಂದ್ರ,ಮಂಗಳವಾಡ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಅರ್ಲವಾಡ ಇವರ ಸಂಯುಕ್ತಾಶ್ರಯದಲ್ಲಿ 2025,26ನೇ ಸಾಲಿನ ಮಂಗಳವಾಡ ಕ್ಲಸ್ಟರ್ ಮಟ್ಟದ ಎಫ್ ಎಲ್ ಎನ್ ಕಲಿಕಾ ಹಬ್ಬ 04 ಫೆಬ್ರುವರಿ 2026 ರ,ಬುಧವಾರ ದಂದು ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಅರ್ಲವಾಡದಲ್ಲಿ ಎಫ್ ಎಲ್ ಎನ್ ಕಲಿಕಾ ಹಬ್ಬ ಯಶಸ್ವಿಯಾಗಿ ಸಂಪನ್ನಗೊಂಡಿತು. ಕಲಿಕಾ ಹಬ್ಬದ ಸ್ಪರ್ಧೆಯಲ್ಲಿ 1ರಿಂದ 5 ನೇಯ ತರಗತಿಯ ವಿದ್ಯಾರ್ಥಿಗಳಿಗೆ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ ಚಟುವಟಿಕೆಯ ಬಲವರ್ಧನೆಗೆ ಪೂರಕವಾಗಿ ಪೋಷಕರೊಂದಿಗೆ ಮೋಜಿನ ಆಟ,ಕಥೆ ಹೇಳುವುದು, ಗಟ್ಟಿಯಾಗಿ ಓದುವುದು, ಸಂತೋಷದಾಯಕ ಗಣಿತ, ಆರೋಗ್ಯ ಮತ್ತು ಪೌಷ್ಟಿಕಾಂಶ,ಕೈ ಬರಹ,ರಸಪ್ರಶ್ನೆ ಸ್ಪರ್ಧೆಗಳಲ್ಲಿ ಮಂಗಳವಾಡ ಕ್ಲಸ್ಟರಿನ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಸ್ಪರ್ಧೆಯ ನಿರ್ಣಾಯಕರಾಗಿ ಮಂಗಳವಾಡ ಕ್ಲಸ್ಟರಿನ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರು ಅತ್ತ್ಯುತ್ತಮ ಸಹಕಾರ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ವಿಶ್ವನಾಥ ಡಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ನವಗ್ರಾಮ ಮಾತನಾಡಿ ಮಕ್ಕಳಲ್ಲಿ ಓದುವ ಆಸಕ್ತಿ ಹೆಚ್ಚಿಸಲು ಅವರಲ್ಲಿನ ಸೃಜನಾತ್ಮಕತೆ ಮತ್ತು ವಿಮರ್ಶಾತ್ಮಕ ಚಿಂತನೆಗಳನ್ನು ಬೆಳೆಸಲು ಕಲೆ,ಸಂಗೀತ,ಆಟಗಳ ಮೂಲಕ ಸಂತೋಷದಾಯಕ ಕಲಿಕೆಯನ್ನು ಒದಗಿಸುವ ಒಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ವಿನೂತನ ಕಾರ್ಯಕ್ರಮವಾಗಿದೆ. ಕಲಿಕಾ ಕೊರತೆ ನೀಗಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮದ ಭಾಗವಾಗಿದೆ,ಕಲಿಕಾ ಹಬ್ಬವು ಮಕ್ಕಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸಿ,ಸರ್ವತೋಮುಖ ಬೆಳವಣಿಗೆಗೆ ಸಹಾಯ ಮಾಡುವ ಒಂದು ವಿಶಿಷ್ಟ ಹಬ್ಬವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ,ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಅಭಿನಂದನಾ ಪತ್ರ ವಿತರಿಸಲಾಯಿತು. ಮಧ್ಯಾಹ್ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರಿಗೆ, ಮಂಗಳವಾಡ ಕ್ಲಸ್ಟರಿನ ಮುಖ್ಯ ಶಿಕ್ಷಕರು,ಸಹ ಶಿಕ್ಷಕರು, ನಿರ್ಣಾಯಕರಿಗೆ, ವಿದ್ಯಾರ್ಥಿಗಳಿಗೆ ಎಲ್ಲರಿಗೂ ಅಚ್ಚುಕಟ್ಟಾದ ಶುಚಿ-ರುಚಿಯಾದ ಊಟದ ವ್ಯವಸ್ಥೆಯನ್ನು ಅರ್ಲವಾಡ ಶಾಲಾ ಶಿಕ್ಷಕರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು,ಪಾಲಕರ,ಪೋಷಕರ ಸಹಕಾರದಲ್ಲಿ ಮಾಡಿದ್ದರು. ಅರ್ಲವಾಡ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು ಎಸ್ ಡಿ ಎಂ ಸಿ,ಹಳೆ ವಿದ್ಯಾರ್ಥಿಗಳ ಸಂಘ,ಶಿಕ್ಷಕ ವೃಂದ,ವಿದ್ಯಾರ್ಥಿ ವೃಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ,ಸಮೂಹ ಸಂಪನ್ಮೂಲ ವ್ಯಕ್ತಿಗಳು,ಮಂಗಳವಾಡ ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು,ಸಹ ಶಿಕ್ಷಕ ವೃಂದದವರು,ಸಮಸ್ತ ವಿದ್ಯಾರ್ಥಿ ವೃಂದದವರು ಯಶಸ್ಸಿನ ಕಾರ್ಯಕ್ರಮಕ್ಕೆ ಅತ್ತ್ಯುತ್ತಮ ಸಹಕಾರ ನೀಡಿದರು. ಅರ್ಲವಾಡ ಶಾಲೆಯ ಸಹ ಶಿಕ್ಷಕಿಯರಾದ ಶಾಂತಾಬಾಯಿ ಮರಾಠಿ,ರಾಜಶ್ರೀ ಜಾಧವ,ಅತಿಥಿ ಶಿಕ್ಷಕಿಯರಾದ ಅಕ್ಷತಾ ಮರಾಠಿ,ಅಕ್ಷತಾ ಅಂಬ್ಲಿ ಮಕ್ಕಳಿಗೆ ಮಾರ್ಗದರ್ಶನ,ಸಹಕಾರ ನೀಡಿದರು. ಕಲಿಕಾ ಹಬ್ಬದ ಕಾರ್ಯಕ್ರಮವನ್ನು ಅರ್ಲವಾಡ ಶಾಲೆಯ ಸಹ ಶಿಕ್ಷಕರಾದ ಶಿವಾನಂದ ಹಿರೇಮಠ ಅತ್ಯುತ್ತಮವಾಗಿ ನಿರೂಪಿಸಿದರು.ಕೊನೆಯಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಪ್ರತ್ಯಕ್ಷ,ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಶಾಲೆಯ ಸಹ ಶಿಕ್ಷಕರಾದ ಕಾರ್ತಿಕ ಕೆ.ಕೆ ವಂದನಾರ್ಪಣೆ ಸಲ್ಲಿಸಿದರು.
