Banner Ad

ಸುದ್ದಿ ಕನ್ನಡ ವಾರ್ತೆ
ಮುಂಡಗೋಡ: ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಉತ್ತಮ ರಸ್ತೆ ಸಂಪರ್ಕ ಅತ್ಯಂತ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ಹಳ್ಳಿ ಹಳ್ಳಿಗಳ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಶುಕ್ರವಾರ ತಾಲೂಕಿನ ಬೆಡಸಗಾಂವ ಗ್ರಾಪಂ ವ್ಯಾಪ್ತಿಯ ಜಳಗೇರಿ ಗ್ರಾಮದಲ್ಲಿ 95 ಲಕ್ಷ ರೂ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ನೂತನ ರಸ್ತೆ ನಿರ್ಮಾಣದಿಂದ ಜಳಗೇರಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನತೆಗೆ ಸುಗಮ ಸಂಚಾರ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ತಿಳಿಸಿದರು.

Banner Ad

ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ಪ್ರಕಾಶ ನಾಯ್ಕ, ಬೆಡಸಗಾಂವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜೈದೇವ ನಾಯ್ಕ, ಸತೀಶ ನಾಯ್ಕ, ಆರ್.ಜಿ. ನಾಯ್ಕ, ಪ್ರಮೋದ ಡವಳೆ ರಾಮಚಂದ್ರ ಭಟ್, ಆನಂದ ದೇವಾಡಿಗ, ವಿಶ್ವನಾಥ ಮರಾಠಿ ಕಾನಳ್ಳಿ ಮುಂತಾದವರು ಉಪಸ್ಥಿತರಿದ್ದರು.

Banner Ad