Banner Ad

ಸುದ್ದಿ ಕನ್ನಡ ವಾರ್ತೆ
ಅಂಕೋಲಾ:ತಾಲೂಕಿನ ಅಂಕೋಲಾದಿಂದ
ಹಾರವಾಡದತ್ತ ಹೊರಟಿದ್ದ ಸರ್ಕಾರಿ ಬಸ್ ಸ್ಟೇರಿಂಗ್ ತುಂಡಾಗಿ ಗದ್ದೆಗೆ ಇಳಿದಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಶುಕ್ರವಾರ ಸಂಭವಿಸಿದೆ.

ಬೆಳಿಗ್ಗೆ 8.30ಕ್ಕೆ ಹಾರವಾಡದ ಕಡೆಗೆ ಬಸ್ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದ ವೇಳೆ ಪ್ರಯಾಣಿಕರು ಭಯ ಭೀತರಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಆದರೆ ಈ ಘಟನೆ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ.

Banner Ad

ಬಸ್ಸಿನ ತಾಂತ್ರಿಕ ದೋಷಗಳು
ಹಾಗೂ ಸುರಕ್ಷತಾ ಕ್ರಮಗಳ ಕೊರತೆ ಬಗ್ಗೆ ಸಂಬಂಧಪಟ್ಟವರಿಗೆ ಹಲವು ಬಾರಿ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶಾಲಾ ಮಕ್ಕಳು ಹಾಗೂ ಪೋಷಕರು, ವಿದ್ಯಾರ್ಥಿಗಳ
ಸಂಚಾರಕ್ಕೆ ಬಳಸುವ ಬಸ್ಸುಗಳ ವ್ಯವಸ್ಥೆ ಹಾಗೂ ಸುರಕ್ಷತೆ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಲಾಗಿದ್ದು ಇನ್ನಾದರೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Banner Ad