Banner Ad

ಸುದ್ದಿ ಕನ್ನಡ ವಾರ್ತೆ

ಶಿರಸಿ : ರಾಜ್ಯದ ಪ್ರತಿಷ್ಠಿತ ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕಿನ ( ಕೆಡಿಸಿಸಿ ) ನೂತನ ಅಧ್ಯಕ್ಷರಾಗಿ ಶಾಸಕ ಶಿವರಾಮ ಹೆಬ್ಬಾರ್ ಸತತ ಎರಡನೇ ಬಾರಿಗೆ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜೋಯಿಡಾದ ಕೃಷ್ಣ ದೇಸಾಯಿ ಒಮ್ಮತದಿಂದ ಆಯ್ಕೆಯಾದರು.

Banner Ad

ಶಿರಸಿಯಲ್ಲಿ ಕೆಡಿಸಿಸಿ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ಸೋಮವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಶಾಸಕ ಹೆಬ್ಬಾರ್ ಹಾಗೂ ಕೃಷ್ಣ ದೇಸಾಯಿ ಕ್ರಮವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದರು. ಈ ಹಿನ್ನಲೆಯಲ್ಲಿ ಮತದಾನ ಪ್ರಕ್ರಿಯೆ ಇಲ್ಲದೇ ಇಬ್ಬರೂ ಅವಿರೋಧ ಆಯ್ಕೆಯಾಗಿದ್ದೂ,ಇವರ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿದ್ದ ಸಹಾಯಕ ಆಯುಕ್ತರಾದ ಚಂದ್ರಶೇಖರ್ ಜಿ.ಆರ್. ಘೋಷಣೆ ಮಾಡಿದರು.ಇವರ ಆಯ್ಕೆಗೆ ಗಣ್ಯರು,ಸಹಕಾರಿ ಬಂಧುಗಳು,ರೈತ ಮಿತ್ರರು ಹರ್ಷ ವ್ಯಕ್ತಪಡಿಸಿದ್ದಾರೆ.

Banner Ad