ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ :ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಸಮೀಪದ ಅರಬೈಲ್ ಘಾಟ್ ನಲ್ಲಿ ಲಾರಿಯೊಂದು 50 ಮೀಟರ್ ಆಳದ ಕಣಿವೆ ಪಲ್ಟಿಯಾದ ಭೀಕರ ಘಟನೆ ಸಂಭವಿಸಿದೆ. ಈ ಭೀಕರ ಘಟನೆಯಲ್ಲಿ ಹತ್ತು ಜನ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು ಇನ್ನಷ್ಟು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ತರಕಾರಿ ಸಾಗಾಟ ಮಾಡುತ್ತಿದ್ದ ಲಾರಿ ಹಾವೇರಿ ಜಿಲ್ಲೆಯ ಸವಣೂರಿನಿಂದ ಕುಮಟಾ ಕಡೆಗೆ 25 ಜನ ಪ್ರಯಾಣಿಕರನ್ನು ಹೊತ್ತು ಒಯ್ಯುತ್ತಿತ್ತು. ಬಾರಿ ಪ್ರಮಾಣದಲ್ಲಿ ಮಂಜುಗಟ್ಟಿದ್ದ ಕಾರಣ ರಸ್ತೆ ಕಾಣದೆಯೇ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಯ ಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿರ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಲಾರಿಯಲ್ಲಿ ಸುಮಾರು 25 ಜನ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.