ಸುದ್ಧಿಕನ್ನಡ ವಾರ್ತೆ
ಕರ್ನಾಟಕದಲ್ಲಿ ಹಿಂಗಾರು ಮಳೆ ಆರ್ಭಟ ಮುಂದುವರೆದಿದೆ. ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ರಾಜ್ಯಾದ್ಯಂತ ಭಾನುವಾರ ಮತ್ತು ಸೋಮವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.(The Meteorological Department has issued a warning that there will be heavy rain across the state of Karnataka on Sunday and Monday).

ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ,ಹಾವೇರಿ,ಬೆಳಗಾವಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ,ಈ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಯಲ್ಲೊ ಅಲರ್ಟ ಘೋಷಿಸಲಾಗಿದೆ.

ಕರಾವಳಿ ಭಾಗದಲ್ಲಿ ಚಂಡಮಾರುತದಂತೆ ವಾತಾವರಣ ಸೃಷ್ಠಿಯಾಗಲಿದ್ದು, ಗಂಟೆಗೆ 35 ರಿಂದ 55 ಕಿಮಿ ವೇಗದಲ್ಲಿ ಗಾಳಿ ಬೀಸಲಿದೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.