ಸುದ್ಧಿಕನ್ನಡ ವಾರ್ತೆ
ಕುಮಟಾ: ಹಿಂಸಾತ್ಮಕವಾಗಿ ಲಾರಿಯೊಂದರಲ್ಲಿ ಸಾಗಿಸಲಾಗುತ್ತಿದ್ದ 27 ಎಮ್ಮೆಗಳನ್ನು ರಕ್ಷಣೆ ಮಾಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ66 ರ ಎಪಿಎಂಸಿ ಬಳಿ ನಡೆದಿದೆ.
ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳದ ಪಾಲಕ್ಕಾಡ್ ಎಂಬಲ್ಲಿಗೆ ಎಮ್ಮೆಗಳನ್ನು ವಧಿಸುವ ದೃಷ್ಟಿಯಿಂದ ಹಿಂಸಾತ್ಮಕವಾಗಿ ಕೊಂಡೊಯ್ಯುತಿದ್ದು ಖಚಿತ ಮಾಹಿತಿ ಆಧರಿಸಿ ಕುಮಟಾ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರು ಮೈಸೂರಿನ ಅಯೂಬ್ ಅಹಮದ್ ರಶೀದ್ (35), ಕೇರಳ ಕಾಸರಗೋಡಿನ ಅಬೂಬಕ್ಕರ್ ಮಹಮ್ಮದ್ (53), ಅಬ್ದುಲ್ ರೆಹಮಾನ್ ಪಲ್ಲಿಯನ್ (60) ಹಾಗೂ ಹಾಸನ ಜಿಲ್ಲೆ ಹೊಳೆನರಸೀಪುರದ ಅಜಗರ್ ಹುಸೈನ್ ಇಶ್ರತ್ ಹುಸೈನ್ (32) ಎನ್ನುವವರಾಗಿದ್ದು ಲಾರಿಸಹಿತ ಜಾನುವಾರುಗಳನ್ನು ವಶಕ್ಕೆ ಪಡೆದ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.