ಸುದ್ಧಿಕನ್ನಡ ವಾರ್ತೆ
ಯಲ್ಲಾಪುರ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಪ್ರಸಿದ್ಧ ಗಂಟೆ ಗಣಪತಿ ದೇವಸ್ಥಾನದಲ್ಲಿ ಅಷ್ಠಬಂಧ,ಶಿಖರ ಪ್ರತಿಷ್ಠೆಯ ಅಂಗವಾಗಿ ಫೆಬ್ರುವರಿ 28 ರಿಂದ ಮಾರ್ಗ 3 ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಗಂಟೆಗಣಪತಿ ದೇವಸ್ಥಾದಲ್ಲಿ 4 ದಿನಗಳ ಕಾಲ ಅಷ್ಠಬಂಧ, ಶಿಖರಪ್ರತಿಷ್ಠೆ, ಧ್ವಜ ಪ್ರತಿಷ್ಠೆ, ನೂತನ ದೇವಾಲಯ, ಯಾಗಶಾಲೆ ಮತ್ತು ಗುರುಭವನ ಲೋಕಾರ್ಪಣೆ ಕಾರ್ಯಕ್ರಮಗಳು ಜರುಗಲಿದೆ. ಈ ಅವಧಿಯಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರತಿದಿನ ಸುಮಾರು 8 ಸಾವಿರ ಜನ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ. ಸುಮಾರು 48 ಲಕ್ಷ ರೂ ಅಂದಾಜು ವೆಚ್ಛದಲ್ಲಿ ಈ ಎಲ್ಲಾ ಕಾರ್ಯಕ್ರಮಗಳಿಗೆ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಭಕ್ತಾದಿಗಳು ನೀಡುವ ದೇಣಿಗೆಯಿಂದಲೇ ಎಲ್ಲಾ ಸಿದ್ಧತಾ ಕಾರ್ಯಗಳು ನಡೆಯುತ್ತಿದೆ.

ನಾಲ್ಕು ದಿನಗಳ ಕಾಲ ನಡೆಯುವ ಕಾರ್ಯಕ್ರಮಗಳಲ್ಲಿ ಪ್ರತಿದಿನ ಪ್ರಾತಃ ಕಾಲದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.