ಸುದ್ಧಿಕನ್ನಡ ವಾರ್ತೆ
ಯಲ್ಲಾಪುರ:ವಿಳಂಭ ವಿವಾಹವೇ ಹಿಂದೂ ಸಮಾಜ ಹಿಂದುಳಿಯಲು ಪ್ರಮುಖ ಕಾರಣ. ಹಿಂದು ಸಮಾಜ ಹಿಂದಕ್ಕೆ ಹೋಗಲು ಸೂಕ್ತ ವಯಸ್ಸಿನಲ್ಲಿ ವಿವಾಹವಾಗದಿರುವುದೇ ಮುಖ್ಯ ಕಾರಣ. ಸರಿಯಾದ ವಯಸ್ಸಿನಲ್ಲಿ ತಮ್ಮ ಮಕ್ಕಳು ವಿವಾಹವಾಗಲು ಪಾಲಕರು ಮಾರ್ಗದರ್ಶನ ಮಾಡಬೇಕು ಎಂದು ಸೋಂದಾ ಸ್ವರ್ಣವಲ್ಲಿಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಂದಗುಳಿಯ ಘಂಟೆ ಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಠಬಂಧ ಮಹೋತ್ಸವದ ಧರ್ಮ ಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡುತ್ತಿದ್ದರು.
ಮನಸ್ಸಿನ ಶುಧ್ಧಿಗಾಗಿ ದೇವಸ್ಥಾನಗಳ ಅಗತ್ಯವಿದೆ. ವಿಚಾರಶುದ್ಧಿಯ ಕೊರತೆಯಿಂದ ನಮ್ಮ ಆಚಾರದಲ್ಲಿ ಅಶುಧ್ಧಿಯಾಗಿದೆ. ಆಚಾರ.ವಿಚಾರ ಹಾಗೂ ಪ್ರಚಾರ ಶುದ್ಧಿಯಾಗಲು ಮೊದಲ ಹಂತ ದೇವಸ್ಥಾನದಲ್ಲಿ ಆರಂಭವಾಗಬೇಕು. ಅರ್ಚಕನ ತಪೋಯೋಗದಿಂದ ದೇವಸ್ಥಾನಗಳು ಬೆಳೆಯಬೇಕು. ದೇವಸ್ಥಾನ ಭಕ್ತಿಯ ಕೇಂದ್ರವಾಗಬೇಕು. ಸಂಪಾದನೆ ಅಲ್ಲಿನ ಮುಖ್ಯ ಉದ್ಧೇಶವಾಗಬಾರದು ಎಂದು ಶ್ರೀಗಳು ನುಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಿರಳಗಿಯ ಶ್ರೀ ಬ್ರಹ್ಮಾನಂದ ಭಾರತಿ ಸ್ವಾಮೀಜಿಗಳು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ ಹೆಬ್ಬಾರ್, ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಶಾಸಕ ವಿ.ಎಸ್ ಪಾಟೀಲ್, ಗೋವಾದ ಮಾಜಿ ಶಾಸಕ ವಿಜಯ್ ಪೈ, ವರ್ತಕ ಎಂ.ಎಸ್ ಹೆಗಡೆ ಸಾಗರ, ಹಿರಿಯರಾದ ಗಣಪತಿ ಭಟ್ಟ ಗೇರಗದ್ದೆ ಉಪಸ್ಥಿತರಿದ್ದರು.